ಒಂದು ವಾರ ಅಧಿವೇಶನ ವಿಸ್ತರಿಸಲಿ-ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಕೋರಿ ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರಿಗೆ ಪತ್ರ ಮುಖೇನ ಮನವಿ ವಿಪಕ್ಷ ನಾಯಕ ಆರ್.ಅಶೋಕ್ ಮಾಡಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದಸ್ಯರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ.

- Advertisement - 

ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಮಾನ್ಯ ಸದಸ್ಯರುಗಳಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ನನ್ನ ಮನವಿಯನ್ನು ಪರಿಗಣಿಸಿ, ಸನ್ಮಾನ್ಯ ಸಭಾಧ್ಯಕ್ಷರು ವಿಧಾನಮಂಡಲದ ಅಧಿವೇಶನವನ್ನು ಒಂದು ವಾರಗಳ ವಿಸ್ತರಣೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";