ಕೊಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಲಿ-ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೆಕ್ಕೆಜೋಳ ಬೆಳೆದ ರೈತರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಕಬ್ಬು ಬೆಳೆಗಾರರ ನಂತರ ಈಗ ಮೆಕ್ಕೆಜೋಳ ರೈತರು ಸಂಕಷ್ಟದ ಸುಳಿಗೆ ಸಿಲುಕಿದ್ದಾರೆ. ಆದರೆ ಎಂದಿನಂತೆ ಈ ದರಿದ್ರ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟಕ್ಕೆ ಕ್ಯಾರೆ ಅನ್ನದೇ ರೈತ ವಿರೋಧಿ ಧೋರಣೆ ಪ್ರದರ್ಶಿಸುತ್ತಿದೆ ಎಂದು ಟೀಕಿಸಿದ್ದಾರೆ.

- Advertisement - 

MSP ಗಿಂತ ಕಡಿಮೆ ಬೆಲೆಯಲ್ಲಿ ಖರೀದಿ, ಗೋವಿನ ಜೋಳ ನಷ್ಟ ಪರಿಹಾರ ನೀಡುವಲ್ಲಿ ತಾರತಮ್ಯ, ಸಮೀಕ್ಷೆಯಲ್ಲಿ ಲೋಪದೋಷದಿಂದ ರೈತರಿಗೆ ನಷ್ಟ, ಇದಕ್ಕೆಲ್ಲಾ ಯಾರು ಹೊಣೆ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ಕೊಡಲೇ: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ರೈತರ ಬೇಡಿಕೆಯಂತೆ, ಎಂ‌ಎಸ್‌ಪಿಗಿಂತ ಹೆಚ್ಚಿನ ದರ ಘೋಷಿಸಿ ಖರೀದಿಸಬೇಕು.

- Advertisement - 

KMF ಸಂಸ್ಥೆಯ ಮೂಲಕ ನೇರವಾಗಿ ರೈತರಿಂದ ಖರೀದಿಸಲು ಆದೇಶಿಸಬೇಕು. ಏಜೆಂಟರು ಮತ್ತು ಮಧ್ಯವರ್ತಿಗಳ ಹಾಕವಳಿಗೆ ಕಡಿವಾಣ ಹಾಕಬೇಕು. ಸಮೀಕ್ಷೆ ಸರಿಯಾಗಿ ನಡೆಸಿ ನ್ಯಾಯಯುತವಾಗಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.

ಇಲ್ಲವಾದಲ್ಲಿ ಕಬ್ಬು ಬೆಳೆಗಾರರು ನಡೆಸಿದ ಹೋರಾಟದ ರೀತಿಯಲ್ಲಿ ಮೆಕ್ಕೆಜೋಳ ಬೆಳೆಗಾರರೂ ಸಹ ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ ಮತ್ತು ನಮ್ಮ ಅನ್ನದಾತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಶೋಕ್ ಎಚ್ಚರಿಸಿದ್ದಾರೆ.

 

 

Share This Article
error: Content is protected !!
";