ಕೂಡಲೇ ತೊಗರಿ ಖರೀದಿ ಕೇಂದ್ರ ಆರಂಭಿಸಿ-ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಆರಂಭಿಸಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿ ಎರಡು ವಾರ ಕಳೆದರೂ ಯಾವ ಜಿಲ್ಲೆಯಲ್ಲೂ ರೈತರ ನೋಂದಣಿ ಪ್ರಕ್ರಿಯೆ ಶುರು ಆಗದಿರುವುದು ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗೆ ಮತ್ತೊಂದು ತಾಜಾ ನಿದರ್ಶನವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಡಿಕಾರಿದ್ದಾರೆ.

ರಾಜ್ಯ ಸರ್ಕಾರದ ಈ ವಿಳಂಬ ಧೋರಣೆಯಿಂದ, ನಿರ್ಲಕ್ಷ್ಯದಿಂದ ಮುಕ್ತ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ದಿಢೀರ್‌ಕುಸಿತ ಕಂಡಿದ್ದು, ರೈತರು ಸಿಕ್ಕಷ್ಟು ಧಾರಣೆಗೆ ತಮ್ಮ ಫಸಲು ಮಾರಿ ಕೈತೊಳೆದುಕೊಳ್ಳುವ ದುಸ್ಥಿತಿ ಎದುರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ವಾರದ ಹಿಂದೆ ಕ್ವಿಂಟಾಲ್‌ಗೆ 7,500-8,000 ರೂ. ಇದ್ದ ತೊಗರಿ ದರ ಸದ್ಯ 6,800-7,100 ರೂ. ಕುಸಿದಿದ್ದು, ರೈತರು ಸಿಕ್ಕಷ್ಟು ಬೆಲೆಗೆ ತೊಗರಿ ಮಾರಿ ನಷ್ಟ ಅನುಭವಿಸುತ್ತಿದ್ದಾರೆ.

ಒಂದು ಕಡೆ ಹಾಲು ಉತ್ಪಾದಕರಿಗೆ ಕೊಡಬೇಕಾದ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದೀರಿ. ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಹಣ ಬರದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಖರೀದಿ ಕೇಂದ್ರ ಆರಂಭವಾಗದ ಕಾರಣ ತೊಗರಿ ಬೆಳೆಗಾರರು ಸಿಕ್ಕಷ್ಟು ಬೆಲೆಗೆ ಮಾರಿ ನಷ್ಟ ಅನುಭವಿಸುತ್ತಿದ್ದಾರೆ.

ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಪತ್ತೆಯೇ ಇಲ್ಲ. ನಾಡಿನ ರೈತರ ನೆರವಿಗೆ ಬಾರದ ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು ಹೋದರೆಷ್ಟು. ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದು ಅಶೋಕ್ ಎಚ್ಚರಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";