ಸಹಾಯಕ ಜೈಲರ್ ಮೇಲೆ ಹಲ್ಲೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಹಾಯಕ ಜೈಲರ್ ಮೇಲೆ ಸಜಾಬಂಧಿಗಳು ಹಲ್ಲೆ ನಡೆಸಿರುವ ಘಟನೆ ಕಳೆದ ಜನವರಿ 7ರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಅನವಶ್ಯಕವಾಗಿ ಸಜಾಬಂಧಿ ಕಚೇರಿಗೆ ಕೈದಿಗಳಾದ ಆನಂದ್ ಮತ್ತು ಅಬ್ದುಲ್ ಘನಿ ನುಗ್ಗಲು ಯತ್ನಿಸಿದ್ದು, ಈ ವೇಳೆ ಅವರನ್ನು ತಡೆಯಲು ಮುಂದಾದ ಅಸಿಸ್ಟೆಂಟ್ ಜೈಲರ್ ಹಾಗೂ ಜೈಲು ಸಿಬ್ಬಂದಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement - 

ಘಟನೆ ನಡೆದ ನಂತರ ಕರ್ತವ್ಯ ನಿರ್ವಹಣೆಗೆ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಪ್ರಭಾರ ಅಧೀಕ್ಷಕರು ತಡವಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಅದೇ ಪರಿಸ್ಥಿತಿ:
ಕೆಲ ತಿಂಗಳ ಹಿಂದೆ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಡ್ಯಾನ್ಸ್  ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಹಲ್ ಚಲ್ ಎಬ್ಬಿಸಿದ್ದವು. ಈ  ಹಿನ್ನೆಲೆ ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.

- Advertisement - 

ನಂತರ ಡಿಜಿಪಿ ಅಲೋಕ್ ಕುಮಾರ್, ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ಹಾಗೂ ರಾಜಾತಿಥ್ಯಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದರು. ಆದರೂ ಸಹ ಜೈಲಿನ ದುಸ್ಥಿತಿಯಲ್ಲಿ ಯಾವುದೇ ಬದಲಾವಣೆ ಕಾಣದೆ, ಮತ್ತೊಮ್ಮೆ  ಪುಂಡಾಟದ  ಪ್ರಕರಣ ಕೇಳಿಬಂದಿದೆ ಎನ್ನಲಾಗಿದೆ.

Share This Article
error: Content is protected !!
";