ಸಹಾಯಕ ಪ್ರಾಧ್ಯಾಪಕಿ ಸುನಿತಗೆ ಪಿಹೆಚ್ ಡಿ ಪ್ರದವಿ ಪ್ರದಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಂಪವರ್ಮೆಂಟ್ ಆಫ್ ವುಮೆನ್-ಎ ಸ್ಟಡಿ ಆನ್ ಸೆಲ್ಫ್ ಹೆಲ್ಪ್ ಗ್ರೂಪ್- ಸ್ತ್ರೀಶಕ್ತಿ ಇನ್ ಚಿತ್ರದುರ್ಗ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಬಂಧ ಮಂಡಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುನಿತ ಎಂ. ಇವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

- Advertisement - 

ಬೆಂಗಳೂರಿನ ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಡಾ.ಹೆಚ್.ಪ್ರಕಾಶ್ ಮಾರ್ಗದರ್ಶನದಲ್ಲಿ ಸುನಿತ ಎಂ.ರವರು ಪ್ರಬಂಧ ಮಂಡಿಸಿದ್ದರು.

- Advertisement - 

ಡಾಕ್ಟರೇಟ್ ಪದವಿಗೆ ಭಾಜನರಾಗಿರುವ ಸುನಿತ ಎಂ. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿಯೂ ಸಹಾಯಕ ಪ್ರಾಧ್ಯಾಪಕರಾಗಿ ಹದಿನೈದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

 

- Advertisement - 

Share This Article
error: Content is protected !!
";