ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರಿನ ಬಿಜೆಪಿ ಜಿಲ್ಲಾ ಕಾರ್ಯಾಲಯ ಪಾಂಚ ಜನ್ಯದಲ್ಲಿ ಅಟಲ್ ಜೀ ವಿರಾಸತ್ ಜಿಲ್ಲಾ ಸಮ್ಮೇಳನವನ್ನೂ ಬಿಜೆಪಿ ರಾಜ್ಯ ಸಂಚಾಲಕರಾದ ಜಗದೀಶ್ ಹಿರೇಮನಿ ಅವರು ಉದ್ಘಾಟಿಸಿದರು.
ಅಟಲ್ ಜೀ ಕುರಿತ ಚಿತ್ರ ಪ್ರದರ್ಶನ ಮಾಡಲಾಯಿತು ಮತ್ತು ಅಟಲ್ ಜೀ ಜನ್ಮಶತಮಾನೋತ್ಸವದ ಅಂಗವಾಗಿ ಮಂಡಲದ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಿದ ಸಂಕಲಿತ ಚಿತ್ರ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಎಂ. ಆರ್. ದೇವರಾಜ ಶೆಟ್ಟಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಎಚ್. ಸಿ. ಕಲ್ಮರುಡಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಎ ನರೇಂದ್ರ, ಅಭಿಯಾನದ ಜಿಲ್ಲಾ ಪ್ರಮುಖರಾದ ಸಿ. ಎಚ್ ಲೋಕೇಶ್, ಜಿಲ್ಲಾ ಸಂಚಲಕಿ ಚೈತ್ರಶ್ರೀ ಮಾಲತೇಶ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.