ಸರ್ಕಾರಿ ನೌಕರರಿಗಾಗಿ ಅಥ್ಲೆಟಿಕ್ಸ್, ಸಂಗೀತ, ನೃತ್ಯ, ವಾದ್ಯ ಸಂಗೀತ ಸ್ಪರ್ಧೆಗಳು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು . 15 ಮತ್ತು 16 ರಂದು ಎರಡು ದಿನಗಳ ಕಾಲ ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

      ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಮಹಿಳೆಯರಿಗೆ ಮತ್ತು ಪುರುಷರಿಗೆ ವಯೋಮಾನ ಆಧಾರದಲ್ಲಿ ಪ್ರತ್ಯೇಕವಾಗಿ ಆಯೋಜಿಸಲಾಗಿದ್ದು, ವಿವಿಧ ಕ್ರೀಡೆಗಳು, ಈಜು ಸ್ಪರ್ಧೆ, ಸಂಗೀತ ಹಾಗೂ ನೃತ್ಯ ಸ್ಪರ್ಧೆಗಳು ಜರುಗಲಿವೆ.   ಬಾರಿ ವಿಶೇಷವಾಗಿ ಯೋಗ ಸ್ಪರ್ಧೆಯನ್ನು ಸೇರ್ಪಡೆ ಮಾಡಲಾಗಿದೆ.  ಕ್ರೀಡಾ ವಿಭಾಗದಲ್ಲಿ ಮಹಿಳೆಯರಿಗೆ ವಾಲಿಬಾಲ್, ಕಬಡ್ಡಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಷಟಲ್ ಬ್ಯಾಡ್ಮಿಂಟನ್, ಚೆಸ್, ಟೆನ್ನಿಕಾಯ್ಟ್, ಥ್ರೋಬಾಲ್, ಯೋಗ ಮತ್ತು ಖೋಖೋ ಸ್ಪರ್ಧೆಗಳು ನಡೆಯಲಿದ್ದು, ಪುರುಷರ ವಿಭಾಗದಲ್ಲಿ ಫುಟ್ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ಬಾಸ್ಕೆಟ್ ಬಾಲ್, ಚೆಸ್, ಯೋಗ ಮತ್ತು ಖೋಖೋ ಸ್ಪರ್ಧೆ ಏರ್ಪಡಿಸಲಾಗಿದೆ.  ಈಜು ಸ್ಪರ್ಧೆಯಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವಿಭಾಗವಿದ್ದು, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್, ಫ್ರೀ ಸ್ಟೈಲ್ ರಿಲೇ ಸೇರಿದಂತೆ ವಿವಿಧ ಸ್ಪರ್ಧೆಗಳಿವೆ.

     ಅಥ್ಲೆಟಿಕ್ಸ್ ವಿಭಾಗದಲ್ಲಿ 100 ಮೀ., 200, 400, 800 ಹಾಗೂ 1500 ಮೀ. ಓಟದ ಸ್ಪರ್ಧೆ, ಲಾಂಗ್ ಜಂಪ್, ಹೈ ಜಂಪ್, ಶಾಟ್ಪುಟ್, ಡಿಸ್ಕಸ್ ಥ್ರೋ ಸ್ಪರ್ಧೆಗಳಿವೆ.  ಕುಸ್ತಿ, ಭಾರ ಎತ್ತುವ ಸ್ಪರ್ಧೆ, ಪವರ್ ಲಿಫ್ಟಿಂಗ್ ಹಾಗೂ ದೇಹದಾಢ್ರ್ಯ ಸ್ಪರ್ಧೆಗಳು ಜರುಗಲಿವೆ.  

     ಸಾಂಸ್ಕøತಿಕ ಸ್ಪರ್ಧೆಗಳ ವಿಭಾಗದಲ್ಲಿ ಹಿಂದೂಸ್ತಾನಿ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜಾನಪದ ಗೀತೆ ಸ್ಪರ್ಧೆಗಳನ್ನು ಆಯೋಜಿಸಿದ್ದು, ನೃತ್ಯ ವಿಭಾಗದಲ್ಲಿ ಕಥಕ್, ಮಣಿಪುರಿ, ಕೂಚುಪುಡಿ, ಕಥಕ್ಕಳಿ, ಒಡಿಸ್ಸಿ, ಭರತನಾಟ್ಯ, ಜಾನಪದ ನೃತ್ಯ ಸ್ಪರ್ಧೆಗಳು. ವಾದ್ಯ ಸಂಗೀತ ವಿಭಾಗದಲ್ಲಿ ಸ್ಪೀಲಿಂಗ್  ವಾದ್ಯಗಳು, ವಿಂಡ್ ವಾದ್ಯಗಳು, ಪರಕೇಷರ್ ವಾದ್ಯಗಳು.  ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ನಾಟಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

     ರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಮೇಲೆ ತಿಳಿಸಿದ ಎಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಿದ್ದು. ಏಪ್ರಿಲ್ 11 ಒಳಗಾಗಿ  https://forms.gle/VhHQciognY8RpjCA6 ಲಿಂಕ್ನಲ್ಲಿ ವಿವಿರ ಭರ್ತಿ ಮಾಡಿ ಆನ್ಲೈನ್ನಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಎಲ್ಲ ಕ್ರೀಡಾಪಟುಗಳು ಇಲಾಖಾ ಮುಖ್ಯಸ್ಥರಿಂದ ನೀಡಲಾದ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸಬೇಕು.  

ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು . 15 ಮತ್ತು 16 ರಂದು ಎರಡು ದಿನಗಳ ಕಾಲ ಜರುಗುವ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ನೆಲವಗಿ ಅವರು ಮನವಿ ಮಾಡಿದ್ದಾರೆ.

 

Share This Article
error: Content is protected !!
";