ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ವಸ್ತು ತಯಾರಿಸಿ ಮಾರಾಟ ಮಾಡುತ್ತಿದ್ದ ಗೋದಾಮಿನ ಮೇಲೆ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಗೃಹೋಪಯೋಗಿ ವಸ್ತುಗಳನ್ನು ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಗೋದಾಮುಗಳ ಮೇಲೆ ಸಿಸಿಬಿಯ ಆರ್ಥಿಕ ಅಪರಾಧ ದಳದ ಪೊಲೀಸರು ದಾಳಿ ನಡೆಸಿ ಕೋಟ್ಯಂತರ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement - 

ಬೆಂಗಳೂರಿನ ಕಾಟನ್‌ಪೇಟೆ, ಮಾಚೋಹಳ್ಳಿ, ಕಾಚೋಹಳ್ಳಿಯ ಗೋದಾಮಿನಲ್ಲಿ ನಕಲಿಯಾಗಿ ತಯಾರಿಸಿದ್ದ ಲೈಜಾಲ್, ಹಾರ್ಪಿಕ್, ಕಾಲಿನ್, ವಿವಿಧ ಡಿಟರ್ಜಂಟ್ ಪೌಡರ್‌ಗಳು, ಟೀ-ಪುಡಿ, ಗುಡ್ ನೈಟ್ ಲಿಕ್ವಿಡ್ ಸೇರಿದಂತೆ 1.75 ಕೋಟಿ ಮೌಲ್ಯದ ನಕಲಿ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.

- Advertisement - 

ಪ್ರತಿಷ್ಠಿತ ಕಂಪನಿಯ ಅಧಿಕೃತ ಪ್ರತಿನಿಧಿಯಿಂದ ದೊರೆತ ಮಾಹಿತಿಯನ್ನು ಆಧರಿಸಿ ಸಿಸಿಬಿಯ ಆರ್ಥಿಕ ಅಪರಾಧ ದಳದ ಪೊಲೀಸರು, ಕಾಟನ್‌ಪೇಟೆ, ಮಾಚೋಹಳ್ಳಿ, ಕಾಚೋಹಳ್ಳಿಗಳಲ್ಲಿರುವ ಗೋದಾಮುಗಳ ಮೇಲೆ ದಾಳಿ ನಡೆಸಿದ್ದರು.

ಈ ವೇಳೆ ನಕಲಿಯಾಗಿ ತಯಾರಿಸಿ ಶೇಖರಿಸಿಟ್ಟಿದ್ದ ವಿವಿಧ ಕಂಪನಿಗಳ ಉತ್ಪನ್ನಗಳು ಪತ್ತೆಯಾಗಿವೆ. ಅವುಗಳನ್ನ ವಶಕ್ಕೆ ಪಡೆದು ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇದೇ ರೀತಿ ನಕಲಿ ವಸ್ತುಗಳನ್ನು ತಯಾರಿಸಿ ದಾಸ್ತಾನು ಮಾಡಲಾಗಿರುವ ಸ್ಥಳಗಳ ಕುರಿತು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement - 

 

Share This Article
error: Content is protected !!
";