ಉಗ್ರರ ನೆಲೆಗಳ ಮೇಲೆ ದಾಳಿ: ಕೇಂದ್ರ ಸರ್ಕಾರದ ಸೂಚನೆ ಪಾಲಿಸಲಾಗುತ್ತಿದೆ -ಸಿಎಂ

News Desk

 ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ  ದಾಳಿಮಾಡಿರುವ  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು.

ಎಲ್ಲೆಡೆ ಎಚ್ಚರಿಕೆ-
ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ  ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು
, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ದೇವಾಲಯಗಳಲ್ಲಿ ಪೂಜೆ-
ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಬಹತೇಕ ಗದಿಪಾರಾಗಿದ್ದಾರೆ. ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಡಿಪಾರು ಮಾಡಲಾಗಿದೆ.

ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

 

 

Share This Article
error: Content is protected !!
";