ಕಾಂಗ್ರೆಸ್ ಸರ್ಕಾರದಿಂದ ವಿಪಕ್ಷ ಶಾಸಕರ ಹತ್ತಿಕ್ಕುವ ಪ್ರಯತ್ನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದಿಂದ ವಿಪಕ್ಷ ಶಾಸಕರನ್ನು ಹತ್ತಿಕ್ಕುವ ಪ್ರಯತ್ನ! ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದರು.

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಅವನ ತಾಯಿ ವಿಜಯಲಕ್ಷ್ಮೀ ಅವರು “ನಾನು ಬೈರತಿ ಬಸವರಾಜ್ ವಿರುದ್ಧ ದೂರು ಕೊಟ್ಟಿಲ್ಲ, ಪೊಲೀಸರೇ ಹೆಸರು ಹಾಕಿಕೊಂಡಿದ್ದಾರೆ” ಎಂದು ಹೇಳಿರುವುದು ಕಾಂಗ್ರೆಸ್ ಸರ್ಕಾರ ಈ ಪ್ರಕರಣದಲ್ಲಿ ಯಾವ ಕೀಳು ಮಟ್ಟಕ್ಕೆ ಇಳಿದು ರಾಜಕೀಯ ದ್ವೇಷ ಸಾಧಿಸುತ್ತಿದೆ ಎನ್ನುವುದನ್ನ ಸಾಬೀತು ಪಡಿಸಿದೆ.

- Advertisement - 

ಮಾತೆತ್ತಿದರೆ ಸಿಬಿಐ, ಐಟಿ, ಇಡಿ ಮೂಲಕ ಕೇಂದ್ರ ಸರ್ಕಾರ ವಿಪಕ್ಷಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವ ಕರ್ನಾಟಕ ಕಾಂಗ್ರೆಸ್ ನಾಯಕರು, ದೂರಿನಲ್ಲಿ ಶಾಸಕರ ಹೆಸರೇ ಇಲ್ಲದಿದ್ದರೂ ಅವರ ಮೇಲೆ ದುರುದ್ದೇಶದಿಂದ ಎಫ್ಐಆರ್ ಹಾಕಿರುವುದು ಯಾವ ಸೀಮೆ ನ್ಯಾಯ?

ಸುಳ್ಳು ಕೇಸುಗಳನ್ನು ಹಾಕುವ ಮೂಲಕ ಬಿಜೆಪಿ ಶಾಸಕರಿಗೆ ಬೆದರಿಕೆ ಹಾಕಬಹುದು ಎಂಬ ಭ್ರಮೆಯಿಂದ ಕಾಂಗ್ರೆಸ್ ಸರ್ಕಾರ ಹೊರಬರಬೇಕು. ಬಿಜೆಪಿ ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ. ಆರೋಪ ಇದ್ದರೆ ಕಾನೂನಿನ ಪ್ರಕಾರ ತನಿಖೆ ಮಾಡಲಿ. ನ್ಯಾಯಾಲಯದಲ್ಲಿ ಸಾಬೀತು ಮಾಡಲಿ. ಅದು ಬಿಟ್ಟು ಈ ರೀತಿ ದ್ವೇಷ ರಾಜಕಾರಣ ಮಾಡಿ ವಿಪಕ್ಷ ಶಾಸಕರನ್ನು ಟಾರ್ಗೆಟ್ ಮಾಡಿದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಅಶೋಕ್ ಎಚ್ಚರಿಕೆ ನೀಡಿದರು.

- Advertisement - 

 

Share This Article
error: Content is protected !!
";