ಕೈಗಾರಿಕೆ ಸಚಿವರನ್ನ ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಸ್ಟ್ರೇಲಿಯಾ ದೇಶದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ(HillaryMcGeachy) ಅವರು ಬುಧವಾರ ಬೆಂಗಳೂರಿನ ಖನಿಜ ಭವನದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರನ್ನು ಭೇಟಿಮಾಡಿ ಚರ್ಚಿಸಿದರು.

ಈ ವೇಳೆ ಆಸ್ಟ್ರೇಲಿಯಾ ಮತ್ತು ಕರ್ನಾಟಕದ ನಡುವಿನ ದ್ವಿಪಕ್ಷೀಯ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳು ಹಾಗೂ ಆರೋಗ್ಯ, ಶಿಕ್ಷಣ ಮತ್ತು ಸುಸ್ಥಿರ ಅಭಿವೃದ್ಧಿ ಕ್ಷೇತ್ರಗಳಲ್ಲಿ ಸಹಕಾರದ ಸಾಧ್ಯತೆಗಳನ್ನು ಕುರಿತು  ಚರ್ಚಿಸಿದೆವು ಎಂದು ಎಂ.ಬಿ ಪಾಟೀಲ್ ತಿಳಿಸಿದರು.

- Advertisement - 

 

- Advertisement - 
Share This Article
error: Content is protected !!
";