ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರದಲ್ಲಿ ಮುಳಗಿರುವ ಸರ್ಕಾರ ಬಡವರು , ಮಧ್ಯಮ ವರ್ಗದ ಜೀವ ಹಿಂಡುತ್ತಿರುವುದರ ಜೊತೆಗೆ ಈಗ ತನ್ನ ಹುಳುಕುಗಳನ್ನು ಮುಚ್ಚಿಕೊಳ್ಳಲು ಮಾಧ್ಯಮಗಳ ಮೇಲೆ ಸರ್ವಾಧಿಕಾರಿ ಧೋರಣೆ ತೋರಿಸುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಾಪ್ರಹಾರ ಮಾಡಿದ್ದಾರೆ.
ಮಾಧ್ಯಮ ಮಿತ್ರರೂ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಬಳಿ ಮಾತ್ರ ನಿಂತು ವರದಿ ಮಾಡುವಂತೆ ಸುತ್ತೋಲೆ ಹೊರಡಿಸಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪ್ರತಿಕಾರಂಗದವರಿಗೆ ಮೊದಲಿನಂತೆ ನಿರ್ಭಿತಿಯಿಂದ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ನಿಖಿಲ್ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

