ಛಲವಾದಿ ಮಹಾಸಭಾದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕು ಛಲವಾದಿ ಮಹಾಸಭಾದ ವತಿಯಿಂದ ಸಮುದಾಯದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.

     ಸಮಾರಂಭದಲ್ಲಿ ಸುಬ್ಬು ಹೊಲೆಯರ್ ಭಾಗವಹಿಸಿ ಮಾತನಾಡಿ ಶೋಷಿತ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕಡೆ ಗಮನ ಹರಿಸಬೇಕು. ತಳ ಸಮುದಾಯಗಳು ಶಿಕ್ಷಣದಿಂದ ವಂಚಿತ ವಾಗುತ್ತಿವೆ. ಇಂಥ ಸಂದರ್ಭದಲ್ಲಿ ಸಮುದಾಯದ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿ ರುವುದು ಶ್ಲಾಘನೀಯ ಸಂಗತಿ. ಇಂತಹ ಸಾಧಕ ವಿದ್ಯಾರ್ಥಿಗಳನ್ನು ಗುರ್ತಿಸಿ ಸನ್ಮಾನಿಸುವ ಛಲವಾದಿ ಮಹಾ ಸಭಾದ ಕಾರ್ಯ ಅನನ್ಯವಾದುದುಎಂದರು.

- Advertisement - 

     ಕಾರ್ಯಕ್ರಮದಲ್ಲಿ ಸುಮಾರು ಅರವತ್ತುಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ., ಜಿ. ಪಿ. ದೇವರಾಜ್, ರಾಜ್ಯ ಛಲವಾದಿ ಮಹಾಸಭಾದ ಅಧ್ಯಕ್ಷೆ ವಾಣಿ ಕೆ. ಶಿವರಾಮ್, ತಾಲೂಕು ಅಧ್ಯಕ್ಷ ಗುರುರಾಜಪ್ಪ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

 

- Advertisement - 

Share This Article
error: Content is protected !!
";