ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೊಳಕಾಲ್ಮುರು ತಾಲ್ಲೂಕಿನ ಸಿದ್ದಯ್ಯನಕೋಟೆ ಪಿ.ಆರ್.ಕಾಂತರಾಜ್ ಸೇರಿದಂತೆ 29 ಮಂದಿ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸನ್ಮಾನಿಸಿದರು.
ಕನ್ನಡಾಂಭೆಗೆ ನುಡಿನಮನ: ಕರ್ನಾಟಕಕ್ಕೆ 50ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಾಡಿನ ಹೆಸರಾಂತ ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಕಲಾವಿದರು ಹಾಡಿದರು.
ಕುವೆಂಪು ರಚಿತ “ಎಲ್ಲಾದರು ಇರು ಎಂತಾದರು ಇರು”, ದ.ರಾ.ಬೇಂದ್ರ ರಚಿಸಿರುವ “ಒಂದೇ ಒಂದೇ ಕರ್ನಾಟಕ ಒಂದೇ”, ಸಿದ್ದಯ್ಯ ಪುರಾಣಿಕರು ರಚಿಸಿರುವ “ಹೊತ್ತಿತೋ ಹೊತ್ತಿತು ಕನ್ನಡದ ದೀಪ”, ಚನ್ನವೀರ ಕಣವಿ ಅವರು ಬರೆದಿರುವ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಹಾಗೂ ನಾಗರಹಾವು ಚಲನಚಿತ್ರದ ಕನ್ನಡ ನಾಡಿನ ವೀರರ ಮಣಿಯ ಗೀತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾವಿದ ಮುರಾರ್ಜಿ ಹಾಗೂ ಕಲಾವಿದರು ತಂಡವು ಗೀತ ಗಾಯನ ಪ್ರಸ್ತುತ ಪಡಿಸಿತು.
ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‌ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತ ರಾಘವೇಂದ್ರ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.