ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ದೊಡ್ಡಪೇಟೆಯ ಉಚ್ಚಂಗಿ ಎಲ್ಲಮ್ಮನ ದೇವಸ್ಥಾನ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವೈದ್ಯಾಧಿಕಾರಿ ಡಾ.ಸೈಯದ್ ಬಿಲಾಲ್, ಪೌಷ್ಟಿಕ ಮೇಲ್ವಿಚಾರಕಿ ಸಣ್ಣ ರಂಗಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಗುರುಮೂರ್ತಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರು, ಆರೋಗ್ಯ ಕಾರ್ಯಕರ್ತೆ ಮಂಜುಳಾ ಸಭೆಯಲ್ಲಿ ಭಾಗವಹಿಸಿದ್ದರು.
ಗೋಪಾಲಪುರ-ಮಾರುತಿ ನಗರ ವ್ಯಾಪ್ತಿಗೆ ಬರುವ ಗೋಪಾಲ್ ಪುರ ಏಳನೇ ಕ್ರಾಸ್ ನಲ್ಲಿ ಇದೇ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಪೌಷ್ಟಿಕ ಮೇಲ್ವಿಚಾರಕಿ ಸಣ್ಣ ರಂಗಮ್ಮ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ತಿಪ್ಪಮ್ಮ, ಕಿರಿಯ ಮಹಿಳೆಯ ಆರೋಗ್ಯ ಸಹಾಯಕಿ ರೂಪಾ, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಉಷಾ ಮತ್ತು ಶಿಲ್ಪ ಭಾಗವಹಿಸಿದ್ದರು.

