ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಬುದ್ಧನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಟ್‍ಪಟ್ ನಗರದ ಸರ್ಕಾರಿ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಪ್ರಯುಕ್ತ ಡೆಂಗ್ಯೂ ಜ್ವರ ಹರಡುವ ವಿಧಾನ, ಜ್ವರದ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಕ್ಕಳಿಗೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್ ಜಾಗೃತಿ ಮೂಡಿಸಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಎಸ್. ಆಶೋಕ್ ಶಾಲಾ ಮಕ್ಕಳಿಗೆ ನೀಡುವ ಟಿಡಿ, ಡಿಪಿಟಿ ಲಸಿಕೆ ಹಾಕಿಸುವ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು. ನಂತರ ಒನಕೆ ಓಬವ್ವ ವೃತ್ತದ ಬಳಿಯ ಅಂಗನವಾಡಿ ಕೇಂದ್ರದಲ್ಲಿ ತಾಯಿ ಮಕ್ಕಳ ಲಸಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಶಾಲೆಯ ಮುಖ್ಯಶಿಕ್ಷಕಿ ಸುಧಾದೇವಿ, ಶಿಕ್ಷಕರಾದ ಮಂಜುಳಾ, ಅಪರ್ಣಾ, ಸೌಮ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಸೇರಿದಂತೆ ಮತ್ತಿತರರು ಇದ್ದರು.

