ಗೂಳಯ್ಯನಹಟ್ಟಿ ವಸತಿ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಗೂಳಯ್ಯನಹಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

- Advertisement - 

ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, 1098 ಮಕ್ಕಳ ಸಹಾಯವಾಣಿ,112 ತುರ್ತು ಸಹಾಯವಾಣಿ, ಭೇಟಿ ಬಚಾವೋ ಬೇಟಿ ಪಡಾವೋ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕಾಯ್ದೆ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ಜೆಂಡರ್ ಸ್ಪೆಷಲಿಸ್ಟ್ ಗೀತಾ.ಡಿ ಜಾಗೃತಿ ಮೂಡಿಸಿದರು.

- Advertisement - 

ನಂತರದಲ್ಲಿ ವಸತಿ ಶಾಲೆಯ ಮಕ್ಕಳಿಗೆ ಬಾಲ್ಯ ವಿವಾಹ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ, ಭಕ್ತಿ ಗೀತೆ ಮತ್ತು ಭಾವಗೀತೆ , ಹಾಗೂ ಮೊಬೈಲ್ ಬಿಡಿ ಪುಸ್ತಕ ಹಿಡಿ ಎಂಬ ಶೀರ್ಷಿಕೆ ಮೇಲೆ ಭಾಷಣ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಇವುಗಳನ್ನು ಹಮ್ಮಿಕೊಂಡಿದ್ದು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಹೈಮಾವತಿ, ಪುಷ್ಪ, ವಸತಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿಯ ಜಿಲ್ಲಾ ಸಂಯೋಜಕರು, ವಸತಿ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";