ಸಂವಿಧಾನದ ಆಶಯಗಳ ಜಾಗೃತಿ ಕಾರ್ಯಕ್ರಮ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಆಧಾರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯ ಅಂಗವಾಗಿ “ಸಾಮಾಜಿಕ ನ್ಯಾಯ” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ್, ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಅದರ ವ್ಯಾಪ್ತಿ ವಿಶಾಲವಾದುದು ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

- Advertisement - 

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಅವರು ಸಂವಿಧಾನದ ಮೂಲಭೂತ ಹಕ್ಕುಗಳು, ಜಾತಿ ತಾರತಮ್ಯ, ಅಸ್ಪೃಶ್ಯತೆ ಹಾಗೂ ಲಿಂಗ ತಾರತಮ್ಯದ ಕುರಿತು ಸಭೆಗೆ ವಿಸ್ತಾರವಾಗಿ ಮಾಹಿತಿ ನೀಡಿದರು. ಸಹಾಯಕ ಪ್ರಾಧ್ಯಾಪಕ ವೇದಾಂತ ಏಳಂಚಿ ಅವರು ಸಾಮಾಜಿಕ ಸಮಾನತೆ ಹಾಗೂ ಮಹಿಳೆಯರ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್. ಮಹೇಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";