ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯನ್ನು ಬಹುದಿನಗಳಿಂದ ಮುಂದೂಡುತ್ತಲೇ ಬಂದಿತ್ತು. ಈಗ ದಿಢೀರ್‌ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ ನೇಮಕವಾಗಿದೆ.
ಅದರಲ್ಲೂ ಅಚ್ಚರಿ ಎಂಬಂತೆ ಮೋದಿ ಹಾಗೂ ಅಮಿತ್‌ಶಾ ಸೇರಿಕೊಂಡು ಅಚ್ಚರಿ ಎಂಬಂತೆ 45 ವರ್ಷದ ನಿತಿನ್‌ನವೀನ್‌ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಬಿಜೆಪಿಯ ನೂತನ ಕಾರ್ಯಾಧ್ಯಕ್ಷ ನಿತಿನ್ ನಬಿನ್, ಪಕ್ಷದ ಇತಿಹಾಸದಲ್ಲಿ ಈ ಹುದ್ದೆ ಅಲಂಕರಿಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಇದಕ್ಕೂ ಮೊದಲು ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದನ್ನು ಸ್ಮರಿಸಬಹುದಾಗಿದೆ.
ನಿತಿನ್ ನಬಿನ್ ಅವರೇ ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಎನ್ನಲಾಗಿದೆ. ಹೀಗಾಗಿ ಅವರನ್ನು ಮೊದಲಿಗೆ ಕಾರ್ಯಾಧ್ಯಕ್ಷರನ್ನಾಗಿ ಮಾಡಿ ಬಳಿಕ ನಡ್ಡಾ ಅವರ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಕರ್ನಾಟಕ ಬಿಜೆಪಿಯಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಧಿವೇಶನ ಬಿಟ್ಟು ದೆಹಲಿಗೆ ದಿಢೀರ್ ಹೋಗಿದ್ದಾರೆ.
ನೂತನ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ವಿಜಯೇಂದ್ರ ದೆಹಲಿಗೆ ತೆರಳಿರುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ಮೊದಲೇ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ಎಂದು ಹೇಳಲಾಗಿರುವ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿ ಮಾತುಕತೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಬಿಜೆಪಿ ಹೈಕಮಾಂಡ್ನಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿರುವುದರಿಂದ ರಾಜ್ಯ ಬಿಜೆಪಿಯಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ವಿಜಯೇಂದ್ರ ದೆಹಲಿಗೆ ದಿಢೀರ್ ಹೋಗಿರುವುದರಿಂದ ರಾಜ್ಯಾಧ್ಯಕ್ಷರ ಆಯ್ಕೆ ಸಮೀಪವೇ ಇದೆ ಎನ್ನಲಾಗುತ್ತಿದೆ.

