ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯರು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು (ಸಂಘಟನೆ), ಮಾರ್ಗದರ್ಶಕರೂ ಆಗಿರುವ ಬಿ.ಎಲ್.ಸಂತೋಷ್ ಅವರನ್ನು ಶನಿವಾರ ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ಮಾಡಿ ಚರ್ಚಿಸಿದರು.
ರಾಜ್ಯದಲ್ಲಿ ಪಕ್ಷ ಸಂಘಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ, ಮಾರ್ಗದರ್ಶನ ಪಡೆಯಲಾಯಿತು.
ಪಕ್ಷದ ಸೈದ್ಧಾಂತಿಕತೆ, ವೈಚಾರಿಕ ಸ್ಪಷ್ಟತೆ ಹೊಂದಿರುವ ಸಂತೋಷ್ ಅವರ ಮಾತುಗಳು ನನ್ನಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸದಾ ಸ್ಫೂರ್ತಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.

