ಚಂದ್ರವಳ್ಳಿ ನ್ಯೂಸ್, ದೆಹಲಿ:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಮಾಜಿ ಕೇಂದ್ರ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನಬಂದಂತೆ ಮಾತನಾಡುತ್ತಿದ್ದು ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾಗಿದೆ.
ಈ ಸಂಬಂಧ ಬಿಜೆಪಿ ಪಕ್ಷದ ಕೇಂದ್ರೀಯ ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿಯಾಗಿದ್ದು ಆ ವಿಚಾರವಾಗಿ ಯತ್ನಾಳ್ ಅವರನ್ನ ಅಧೀರರಾಗಿಸಿಲ್ಲ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ದಾವಣಗೆರೆಯಲ್ಲಿ ತಾವು ಸಮಾವೇಶ ಮಾಡಿದಾಗ ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ಅವರಿಬ್ಬರನ್ನು ಹೊರತುಪಡಿಸಿ ಬಿಜೆಪಿಯ ಉಳಿದೆಲ್ಲ ನಾಯಕರು ಅಲ್ಲಿರುತ್ತಾರೆ.
ವಿಜಯೇಂದ್ರ ತನ್ನ ತಂದೆಯ ಹಾಗೆ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿದ್ದಾರೆ, ಅದರೆ ತಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದೆ ಎಂದು ಅವರು ಹೇಳಿದರು.