ಬಕ್ರೀದ್ ಹಬ್ಬ ಆಚರಣೆ ಸೌಹಾರ್ದತೆಯಿಂದ ಕೂಡಿರಲಿ : ಜಿಲ್ಲಾಧಿಕಾರಿ

News Desk

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಬಕ್ರೀದ್ ಹಬ್ಬದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ವತಿಯಿಂದ ವತಿಯಿಂದ ನಗರದ ಎ ಬಿ ಎಂ ಕನ್ವೆನ್ಷನ್ ಹಾಲ್ ನಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಭೆಯನ್ನು
  ಹಮ್ಮಿಕೊಳ್ಳಲಾಗಿತ್ತು.

- Advertisement - 

 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಕಾನೂನು ಉಲ್ಲಂಘನೆ ಮಾಡದ್ದಂತೆ ಹಿಂದೂ ಮುಸ್ಲಿಂ ಮುಖಂಡರಿಗೆ  ಬಕ್ರೀದ್ ಹಬ್ಬದ ಆಚರಣೆಯಲ್ಲಿ  ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಾನ್ಯ ಸಿ ಕೆ ಬಾಬಾ ಸವಿಸ್ತಾರವಾಗಿ ತಿಳಿಸಿದರು.

- Advertisement - 

 ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫಿಯಾ‌ರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆ  ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೆ ಕಾನೂನು ಪಾಲನೆ ಮಾಡುವ ಮೂಲಕ  ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು ಎಂದರು .

  ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಧರ್ಮದ ಆಚರಣೆ ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

- Advertisement - 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಪ್ರಚೋನಕಾರಿ ವಿಡಿಯೋ, ಆಡಿಯೋ ಮತ್ತು ವಾಟ್ಸಾಪ್ ಸಂದೇಶಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಅದರಿಂದ ಪ್ರಚೋದನೆಗೆ ಒಳಗಾಗಬೇಡಿ. ಅದನ್ನು ನೋಡಿಕೊಳ್ಳಲು ಪೊಲೀಸ್‌ ಇಲಾಖೆ ಇದೆ. ನೀವು ಶಾಂತಿ ಸೌಹಾರ್ದತೆಯಿಂದ, ಪರಸ್ಪರ ಪ್ರೀತಿ ವಿಶ್ವಾಸದಿಂದ ದೇವರ ಧ್ಯಾನ ಮಾಡಿ. ಅಶಕ್ತರಿಗೆ ನಿಮ್ಮ ಕೈಲಾದಷ್ಟು ಧಾನ ನೀಡಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿ ಬಕ್ರೀದ್ ಹಬ್ಬದ ಸಮಯದಲ್ಲಿ ಯಾವುದೇ ತರಹದ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

 ಈ ವೇಳೆ ವಿವಿಧ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ , ತಾಲೂಕು ದಂಡಾಧಿಕಾರಿ  ವಿದ್ಯಾವಿಭಾ ರಾಠೋಡ್‌, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿವರ್ಗ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

 

 

Share This Article
error: Content is protected !!
";