ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಂಗಾರಿ ಚಿತ್ರದ ನಿರ್ಮಾಪಕ ಎ. ಎಲ್ಲಪ್ಪ ಅವರು ಸಿನಿಮಾ, ಸಮಾಜ ಸೇವೆ ಅಲ್ಲದೆ ರಾಜಕೀಯ ಕ್ಷೇತ್ರದಲ್ಲೂ ಸಹ ಗುರುತಿಸಿಕೊಂಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸದಸ್ಯರಾದ ಎಲ್ಲಪ್ಪ ಅವರು ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ನಿಸ್ವಾರ್ಥದಿಂದ ಪಕ್ಷದ ಸೇವೆ ಮಾಡುತ್ತಾ ಬಂದಿದ್ದಾರೆ.
ಕಾವೇರಿ ನಗರ, ಮಹದೇವಪುರ, ಗರುಡಾಚಾರ್ ಪಾಳ್ಯದ ಸುತ್ತಮುತ್ತಲಿನ ಜನರ ಕಷ್ಟಗಳಿಗೆ ಶೀಘ್ರವಾಗಿ ಸ್ಪಂದಿಸುತ್ತಿರುವ ಇವರ ಸೇವೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷವು ಇವರನ್ನು ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಘಟಕದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

