ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಹೊಸದುರ್ಗ ಡಿಸಿಸಿ ಬ್ಯಾಂಕ್ ನೌಕರ ನವೀನ್ ಲಂಚ ಪಡೆಯುವಾಗ ಲೋಕಾಯುಕ್ತ ಎಸ್ಪಿ ಎನ್.ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ರೈತರು ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲು 15000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಹೊಸದುರ್ಗ ಡಿ.ಸಿ.ಸಿ. ಬ್ಯಾಂಕ್‌ನ ಮೇಲ್ವಿಚಾರಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಈಗ ಜೈಲು ಕಂಬಿ ಎಣಿಸುತ್ತಿದ್ದಾರೆ.
ಮಾಡದಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಕುಮಾರ್ ಇವರು ರೈತರುಗಳು ಸಾಲಕ್ಕಾಗಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಹೊಸದುರ್ಗ ಶಾಖೆಗೆ ಪರಿಶೀಲನೆಗಾಗಿ ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಮೇಲ್ವಿಚಾರಕ ನವೀನ್ ಅವರು 15,000 ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ. ಅವರು ಲಂಚದ ಹಣಕ್ಕೆ ಬೇಡಿಕೆಯಿಟ್ಟ ಸಮಯದಲ್ಲಿ ನಡೆದ ಸಂಭಾಷಣೆಗಳನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಲೋಕಾಯುಕ್ತ ಪೊಲೀಸ್ ತನಿಖಾಧಿಕಾರಿ ಬಸವರಾಜ ಬಿ. ಲಮಾಣಿ ಅವರಿಗೆ ದೂರು ಸಲ್ಲಿಸಿದ್ದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕ ಆರೋಪಿ ನವೀನ್ ಅವರನ್ನು ಬಂಧಿಸಿದ್ದಾರೆ.