ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನುಮುಷ್ತಾಕ್‌ರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ! ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸೆ. 22ರಿಂದ ಅಕ್ಟೋಬರ್ 2ರ ವರೆಗೆ ನಡೆಯುವ ನಾಡಹಬ್ಬ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಬಾರಿ ದಸರಾವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಬಾನುಮುಷ್ತಾಕ್‌ಅವರು ಉದ್ಘಾಟಿಸುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.
ಕನ್ನಡಕ್ಕೆ ಕೀರ್ತಿ ತಂದಿರುವ ಬಾನು ಮುಷ್ತಾಕ್ ಅವರೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಉದ್ಘಾಟಿಸುವ ಅವಕಾಶ ಸಿಕ್ಕಿರುವುದು ನಮ್ಮೆಲ್ಲರ ಭಾಗ್ಯ ಎಂದು ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

