ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತ ಶರಣಪ್ಪ ಅವರಿಗೆ ನಗದು ಬಹುಮಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಆಯುಕ್ತಾಲಯದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತನಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ತುಮಕೂರು ವಿಶ್ವವಿದ್ಯಾನಿಲಯದ ಎಂ.ಎ.(ಪತ್ರಿಕೋದ್ಯಮ) ಮೊದಲ ವ
?ದ ವಿದ್ಯಾರ್ಥಿ ಶರಣಪ್ಪ ಗುಡದೂರ ಅವರಿಗೆ ೨೧,೦೦೦ ರೂ.ಗಳ ನಗದು ಬಹುಮಾನ ನೀಡಲಾಗಿದೆ.

ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಶರಣಪ್ಪ ಅವರು “ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು” ಕುರಿತು ಬರೆದ ಪ್ರಬಂಧವು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ :
ಬೆಂಗಳೂರಿನ ವಾರ್ತಾ ಸೌಧದಲ್ಲಿ ಅಕ್ಟೋಬರ್ ೨ರಂದು ನಡೆದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೧
,೦೦೦ ರೂ.ಗಳ ನಗದು ಹಾಗೂ ಪುರಸ್ಕಾರ ನೀಡಿ  ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ರಿಜ್ವಾನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ವಾರ್ತಾ ಇಲಾಖೆ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಇದ್ದರು.

  

- Advertisement -  - Advertisement -  - Advertisement - 
Share This Article
error: Content is protected !!
";