ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವು ಕಂಡಿರುವ ಪ್ರಕರಣ ಚಿತ್ರದುರ್ಗದಲ್ಲಿ ಮಂಗಳವಾರ ಜರುಗಿದೆ.
ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವಾಗಿದೆ ಎಂದು ಪೊಷಕರು, ಕರವೇ ಆರೋಪ ಮಾಡಿ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಬಳಿ ವೈದ್ಯರ ನಿರ್ಲಕ್ಷ ಖಂಡಿಸಿ ಪ್ರತಿಭಟನೆ ಮಾಡಲಾಯಿತು.
ವೈದ್ಯ ಡಾ.ರೂಪಾಶ್ರೀ ವಿರುದ್ದ ಕ್ರಮ ಕೈಗೊಳ್ಳುವಂತೆ ಡಿಹೆಚ್ಒಗೆ ಪ್ರತಿಭಟನಾಕಾರರು ಮನವಿ ಸಲ್ಲಿಕೆ ಮಾಡಿ ಒತ್ತಾಯ ಮಾಡಿದರು. ವೈದ್ಯೆ ರೂಪಾಶ್ರೀ ಅವರು ಕಳೆದ ಒಂದು ತಿಂಗಳ ಹಿಂದೆ ಹೆರಿಗೆ ಮಾಡಿದ್ದರು.
ಮಂಗಳವಾರ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ರೋಜಮ್ಮ(24) ಮೃತಪಟ್ಟಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ.
ಹೊಟ್ಟೆ ನೋವು, ಹೊಟ್ಟೆ ಉರಿ, ವಾಂತಿ ಎಂದು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಾಣಂತಿ ರೋಜಾಗೆ ಚಿಕಿತ್ಸೆ ನೀಡವಲ್ಲಿ ನಿರ್ಲಕ್ಷ್ಯ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.