ಬಸನಗೌಡ ಪಾಟೀಲ್ ಯತ್ನಾಳ್ ಬಂಧಿಸಲು ಆಗ್ರಹಿಸಿ ಗೃಹ ಸಚಿವರಿಗೆ ಮನವಿ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ
, ಇದು ಇಡೀ ಇಸ್ಲಾಂ ಧರ್ಮದ ಜನರ ಭಾವನೆಗೆ ಘಾಸಿಯುಂಟು ಮಾಡಿದ್ದು, ಯತ್ನಾಳ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಕೂಡಲೆ ಬಂಧಿಸಬೇಕೆಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ಮುಸ್ಲಿಂ ಸಮುದಾಯದ ಮುಖಂಡರು ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್ ಮತ್ತು ಅಕ್ಯಾಡೆಮಿಯ ಅಧ್ಯಕ್ಷ ನಿಸಾರ್ ಅಹಮದ್ (ಆರಿಫ್) ಪ್ರವಾದಿ ಮಹಮದ್ ಪೈಗಂಬರ್ ರವರು ಇಡೀ ವಿಶ್ವದ ಶಾಂತಿ ಬಯಸಿದ ಧರ್ಮ ಪ್ರವರ್ತಕರಾಗಿದ್ದು, ಅಂಥವರ ಬಗ್ಗೆ ಬಾಯಿ ತೆವಲಿಗಾಗಿ ಮಾತನಾಡಿರುವ ಯತ್ನಾಳ್‌ರನ್ನು ಕೂಡಲೆ ಬಂಧಸಬೇಕು ಎಂದು ಸಚಿವರದಲ್ಲಿ ಮನವಿ ಮಾಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಪದೇ ಪದೇ ಈ ರೀತಿ ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿರುವುದು ಖಂಡನೀಯ.

ಇದೇ ಚಾಳಿಯನ್ನು ಯತ್ನಾಳ್ ಮುಂದುವರಿಸಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಅವರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು. ಇಸ್ಲಾಂ ಧರ್ಮವನ್ನು ಆಧಾರವಾಗಿಟ್ಟುಕೊಂಡು ಪದೇ ಪದೇ ಈ ರೀತಿ ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ನಿಸಾರ್ ಅಹಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

 

Share This Article
error: Content is protected !!
";