500 ಕೋಟಿ ರೂ.ಗಳ ಅವ್ಯವಹಾರ ಆರೋಪ, ತನಿಖೆಗೆ ಆದೇಶಿಸಿದ ಬಿಬಿಎಂಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿ ನಿಂದನೆ, ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಕಿದ
ಆರೋಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.  ಅವರು ಪ್ರತಿನಿಧಿಸುವ ಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮಾಡಲು ಬಿಬಿಎಂಪಿ ಆದೇಶಿಸಿದೆ.

ಆರ್​ಆರ್ ನಗರ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಪಾಲಿಕೆ ಆದೇಶ ಹೊರಡಿಸಿದ್ದು, 2020 ಸೆಪ್ಟೆಂಬರ್​​ನಿಂದ 2022 ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ ಎನ್ನಲಾಗಿದೆ.

ಕಾಮಗಾರಿ ನಡೆಸದೇ ಈ ಅವಧಿಯಲ್ಲಿ ಬಿಲ್ ಬರೆಸಿಕೊಂಡಿರುವ ಆರೋಪ ಆ ಕ್ಷೇತ್ರದ ಶಾಸಕರ ವಿರುದ್ಧ ಕೇಳಿಬಂದಿದೆ. ಇದೀಗ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ತಿಳಿದು ಬಂದಿದೆ.

 ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್ 23 ರಂದೇ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಅದರ ಆಧಾರದಲ್ಲಿ ಸಮಿತಿ ರಚನೆ ಮಾಡಲಾಗಿದೆ. ತನಿಖಾ ಸಮಿತಿಯಲ್ಲಿ ಯೋಜನೆ ವಿಶೇಷ, ಹಣಕಾಸು ವಿಶೇಷ ಆಯುಕ್ತರು, ಕ್ವಾಲಿಟಿ ಚೆಕ್ ಚೀಫ್ ಇಂಜಿನಿಯರ್ ಹಾಗೂ ಟಿವಿಸಿಸಿ ಚೀಫ್ ಇಂಜಿನಿಯರ್ ಒಳಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -  - Advertisement - 
Share This Article
error: Content is protected !!
";