ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ತಾಲೂಕಿನ ಹಾರಕಭಾವಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿರೊಂದಿಗೆ ಶಾಸಕ ಡಾ. ಶ್ರೀನಿವಾಸ್ ಎನ್ ಟಿ. ಕೆಲಸ ಮಾಡಿ ಅಚ್ಚರಿ ಮೂಡಿಸಿದರು.
ನಂತರ ಅವರು ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ 370 ರೂಪಾಯಿಗಳು ದಿನಗೂಲಿ ಇದ್ದು ಈ ಯೋಜನೆಯನ್ನು ಪ್ರತಿಯೊಬ್ಬ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಯಾವುದೇ ಕಾರಣಕ್ಕೂ ಉದ್ಯೋಗವಿಲ್ಲ ಎಂದು ನೆಪ ಹೇಳಿ ವಲಸೆ ಹೋಗದೆ ತಮ್ಮ ತಮ್ಮ ಗ್ರಾಮಗಳಲ್ಲಿ ಈ ಯೋಜನೆಯನ್ನು ಪಡೆದುಕೊಳ್ಳಿ ಎಂದು ಅವರು ಮನವಿ ಮಾಡಿದರು.
ಬಹು ಮುಖ್ಯವಾಗಿ ನಮ್ಮ ತಾಲೂಕಿನ ಎಲ್ಲಾ ಗ್ರಾಮಗಳಿಗೆ ನಾನೇ ಖುದ್ದಾಗಿ ಭೇಟಿ ನೀಡಿದ್ದೇನೆ. ಅಲ್ಲಿನ ಅವ್ಯವಸ್ಥೆ ಮತ್ತು ಗ್ರಾಮಗಳಲ್ಲಿನ ಮನೆಗಳ ಸಮಸ್ಯೆ ನಾನು ಆಲಿಸಿದ್ದೇನೆ ಹಾಗೂ ವಸತಿ ಸಚಿವರ ಜೊತೆ ಮನೆಗಳ ನಿರ್ಮಾಣದ ಬಗ್ಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.
ನಾನು ಯಾವಾಗಲೂ ಬಡವರ ಶೋಷಿತರ ಕಾರ್ಮಿಕರ ಪರ ಇರುವುದಾಗಿ ಶಾಸಕರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕ್ ಪಂಚಾಯತಿ ಇಒ, ಪಿಡಿಒ, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು ಎಂದು ಸಿ ಅರುಣ್ ಕುಮಾರ್ ತಿಳಿಸಿದ್ದಾರೆ.