ಬೀಡಾಡಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕೈಜೋಡಿಸಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ನಗರದಲ್ಲಿ ಬೀಡಾಡಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ನಾಗರೀಕರು ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಯಿ ಸಾಕಾಣಿಕೆದಾರರು ನಿಮ್ಮ ನಾಯಿಗಳನ್ನು ರಸ್ತೆಗೆ ಬಿಡದೆ ಬೆಲ್ಟ್/ಹಗ್ಗದಿಂದ ಕಟ್ಟಿ ನಿಮ್ಮ ಆವರಣದಲ್ಲೇ ಇಟ್ಟುಕೊಳ್ಳತಕ್ಕದ್ದು ಹಾಗೂ

- Advertisement - 

ಸಾರ್ವಜನಿಕರು ತಮ್ಮ ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಆಹಾರವನ್ನು ಹಾಕುತ್ತಿರುವುದು ಕಂಡುಬಂದಿರುವುದರಿಂದ ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದಲ್ಲದೇ ಇದರಿಂದ

ಸಾರ್ವಜನಿಕರಿಗೆ ಉಪದ್ರವಗಳೊಂದಿಗೆ ನಾಯಿ ಕಡಿತಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಈ ಕಛೇರಿಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆಹಾರವನ್ನು ಹಾಕುವುದು ಕಂಡುಬಂದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಂಬಂಧಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";