ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವಶಕ್ತಿಯ ಭವಿಷ್ಯವನ್ನು ಇನ್ನಷ್ಟು ಬಲಪಡಿಸಲು, ಕೌಶಲ್ಯಗಳನ್ನು ಜಗತ್ತಿಗೆ ತಕ್ಕಂತೆ ವಿಸ್ತರಿಸಲು ಮತ್ತು ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲು ನಮ್ಮ ಸರ್ಕಾರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ
ʼಬೆಂಗಳೂರು ಕೌಶಲ್ಯ ಶೃಂಗಸಭೆʼಯನ್ನು ಇದೇ ನವೆಂಬರ್5 ಮತ್ತು 6 ರಂದು ಬೆಂಗಳೂರಿನ ದಿ ಲಲಿತ್‌ಅಶೋಕ್‌ಹೋಟೆಲ್‌ನಲ್ಲಿ ಆಯೋಜಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬನ್ನಿ, ಭಾಗವಹಿಸಿ, ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಪ್ರವೇಶ ಉಚಿತವಾಗಿದ್ದು, ನೋಂದಣಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ. konfhub.com/checkout/benga ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

