ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕರಾದ ಜೆ.ರಾಜು ಬೇತೂರು ಪಾಳ್ಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿರುವ ಗಾಂಧಿ ನಗರ ವಿಶ್ವ ವಿದ್ಯಾನಿಲಯದಲ್ಲಿ ಶನಿವಾರ ನಡೆದ ಘಟಿಕೋತ್ಸವದಲ್ಲಿ ಬೇತೂರು ಪಾಳ್ಯ ರಾಜು ಅವರ ಸಾಮಾಜಿಕ ಸೇವೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರದಾನ ಮಾಡಿದರು.

ವಿಶ್ವ ವಿದ್ಯಾನಿಲಯದ ಉಪಕುಲಪತಿ ಕಮಲೇಶ್ ಗೌಡ ಸೇರಿದಂತೆ ಇತರರು ಪಾಲ್ಗೊಂಡರು.
ಹಾಗಾಗಿ ಇನ್ಮುಂದೆ ಬೇತೂರು ಪಾಳ್ಯ ರಾಜು ಅವರನ್ನ ಇಂದಿನಿಂದ ಡಾ.ರಾಜ್ ಎಂದು ಸ್ನೇಹಿತರು, ಹಿತೈಷಿಗಳು ಕರೆಯಲ್ಪಡವರು.

