ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು 18 ಡಿಸೆಂಬರ್ 2025 ರಂದು ಅಧಿಸೂಚನೆ ಹೊರಡಿಸಲಾಗಿದೆ.

ಆದರೆ, ಕೆಲವು ಮಧ್ಯವರ್ತಿಗಳು ಇದರ ದುರುಪಯೋಗ ಪಡೆದುಕೊಂಡು ಶುಶ್ರೂಷಾಧಿಕಾರಿಗಳ ಉದ್ಯೋಗ ಕೊಡಿಸುವುದಾಗಿ ಸಾರ್ವಜನಿಕರಿಗೆ ಆಮಿಷವೊಡ್ಡಿ ಹಣದ ಬೇಡಿಕೆಯಿಡುತ್ತಿರುವುದು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಬಂದಿದೆ.

- Advertisement - 

ಸಂಸ್ಥೆಯಲ್ಲಿ ಪಾರದರ್ಶಕ ಹಾಗೂ ನಿಯಮಾನುಸಾರವೇ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಉದ್ಯೋಗ ಕೊಡಿಸುವುದಾಗಿ ನಂಬಿಸುವ ಮಧ್ಯವರ್ತಿಗಳಿಗೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಿ ಮೋಸ ಹೋಗಬಾರದು.

ಕೆಲಸ ಕೊಡಿಸುವ ಆಮಿಷವೊಡ್ಡಿ ಯಾರಾದರೂ ಹಣ ಕೇಳಿದರೆ, ಅವರ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊAದಿಗೆ ತಕ್ಷಣವೇ ಸಂಸ್ಥೆಯ ಗಮನಕ್ಕೆ ತರುವಂತೆ ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಬಿ.ವೈ.ಯುವರಾಜರಾಜ್ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";