ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್, ಶಿವಮೊಗ್ಗದ ಮಂಜುನಾಥ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು, ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಶ್ರದ್ಧಾಂಜಲಿ ಅರ್ಪಿಸಿದರು.
ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ಸಿದ್ದರಾಮಯ್ಯ ಅವರು ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅಂತಿಮ ನಮನ ಸಲ್ಲಿಸಿದರು.
ಸಂಸದರಾದ ಪಿ.ಸಿ ಮೋಹನ್, ಮಾಜಿ ಸಚಿವರಾದ ಮುನಿರತ್ನ, ಶಾಸಕರಾದ ಹರೀಶ್‌ಪೂಂಜಾ, ಮಾಜಿ ವಿಧಾನ ಪರಿಷತ್‌ಸದಸ್ಯರಾದ ತುಳಸಿ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಶಿವಮೊಗ್ಗದ ಮಂಜುನಾಥ್‌ರಾವ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ನಮನಗಳನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ, ಪರಿಷತ್‌ಸದಸ್ಯರಾದ ಅರುಣ್ ಅವರು ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಕಾಶ್ಮೀರದ ಪಹಲ್ಗಾಮ್‌ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಾದ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮೃತ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ತಿಳಿಸಿ ಅಂತಿಮ ನಮನ ಸಲ್ಲಿಸಿದರು.
ಬೆಂಗಳೂರಿನ ಮತ್ತಿಕೆರೆಯ ಭರತ್‌ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ಭೂಷಣ್‌ಅವರ ಮನೆಗೆ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಶಾಸಕ ಮುನಿರತ್ನ ಅವರು ತೆರಳಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.