ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ/ಕೊಡಗು:
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಮೂರನೇ ದಿನವಾದ ಬುಧವಾರ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿದ್ದು ಅದರ ನೇತೃತ್ವ ವಹಿಸಿರುವ ಬಿ ಜೆ ಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆ ಪಕ್ಷದ ಕಾರ್ಯಕರ್ತರು ಹಾಗೂ ಚಿತ್ರದುರ್ಗದ ಬಿ ಜೆ ಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್ ಅವರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಎಲ್ಲ ಕಡೆ ಹೋರಾಟ ಮಾಡಲಾಗುತ್ತದೆ. ಬೆಲೆ ಏರಿಕೆ ಮಾಡಿರುವುದನ್ನು ಕೂಡಲೇ ಕಡಿಮೆ ಮಾಡಬೇಕು ಎಂದು ಭಾರ್ಗವಿ ದ್ರಾವಿಡ್ ಅವರು ಆಗ್ರಹ ಮಾಡಿದ್ದಾರೆ.