ಎರಡು ಹಂತದಲ್ಲಿ ಬಿಹಾರ ವಿಧಾನಸಭಾ ಚುನಾವಣೆ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಚುನಾವಣಾ ಆಯೋಗವು ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ್ದು ಎರಡು ಹಂತದಲ್ಲಿ ಮತದಾನ ನಡೆಸಲು ಸಮಯ ನಿಗದಿ ಮಾಡಿದೆ.

ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆದರೇ ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದ್ದು ನವೆಂಬರ್-14 ರಂದು ಫಲಿತಾಂಶ ಪ್ರಕಟಿಸಲಿದೆ.

- Advertisement - 

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಹಾರ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಿಸಿದರು.

ಬಿಹಾರ ರಾಜ್ಯದಲ್ಲಿ 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು 7.43 ಕೋಟಿ ಮತದಾರರಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ, 3.50 ಕೋಟಿ ಮಹಿಳಾ ಮತದಾರರಿದ್ದಾರೆ.

- Advertisement - 

ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೇ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದರು.

 

 

Share This Article
error: Content is protected !!
";