ಬಿಹಾರ ಚುನಾವಣೆ ಮೂರು ದಿನ ವೇತನ ಸಹಿತ ರಜೆ ನೀಡಲು ಡಿಸಿಎಂ ಮನವಿ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ –2025 ನವೆಂಬರ್ 6 ಮತ್ತು 11 ರಂದು ನಡೆಯಲಿದ್ದು, ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಬಿಹಾರದ ಮತದಾರರಿಗೆ ಕನಿಷ್ಟ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಎಲ್ಲಾ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‍ಗಳು, ಗುತ್ತಿಗೆದಾರರು ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಅನುವಾಗುವಂತೆ ಬಿಹಾರ ರಾಜ್ಯದ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸುವಂತೆ ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

