Ad imageAd image

ಬೈಕ್ ವ್ಹೀಲಿಂಗ್: ನಾಲ್ವರು ಯುವಕರು ಸಾವು

khushihost

ಚಂದ್ರವಳ್ಳಿ ನ್ಯೂಸ್, ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ರಸ್ತೆ ದಾಟುತ್ತಿದ್ದವರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯ ಪಿಕೆಪಿಎಸ್ ಬಳಿ ಸೆ. 5 ರಾತ್ರಿ ನಡೆದಿದೆ.

ಮೃತರು ದೇವರಹಿಪ್ಪರಗಿಯ ಹಂಚಲಿಯ ನಿವಾಸಿ ಅನಿಲ್ ಎಂ ಖೈನೂರ (23), ತಾಳಿಕೋಟೆ ತಾಲೂಕಿನ ನಿಂಗರಾಜ ಚೌಡಕಿ (22), ಮುದ್ದೆಬಿಹಾಳ ತಾಲೂಕಿನ ಕುಮಾರ ಪ್ಯಾಟಿ (18) ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಹಾಗೂ ರಾಯಪ್ಪ ಮಹಾಂತಪ್ಪ ಬಾಗೇವಾಡಿ (24) ಎಂಬ ಯುವಕ ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಮೃತರಲ್ಲಿ ಬೈಕ್ ನಲ್ಲಿದ್ದ ಇಬ್ಬರು ಹಾಗೂ ಮತ್ತಿಬ್ಬರು ಪಾದಚಾರಿ ಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯುತ್ತಿದ್ದು, ವಿವಿಧ ಕಾರ್ಯಕ್ರಮಗಳು ಆಯೋಜನೆಯಾಗಿವೆ. ಇವುಗಳನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಆಗಮಿಸಿದ್ದರು.

ಬೈಕ್ ವ್ಹೀಲಿಂಗ್ ಮಾಡಿಕೊಂಡು ಬಂದವರು, ಚಾಲನೆಯ ನಿಯಂತ್ರಣ ಕಳೆದುಕೊಂಡು ರಸ್ತೆ ದಾಟುತ್ತಿದ್ದವರಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಅವಘಡದಲ್ಲಿ ಗಾಯಗೊಂಡಿರುವ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

- Advertisement -  - Advertisement - 
Share This Article
error: Content is protected !!
";