ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಭೋವಿ ಮಠದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ 40ನೇ ಜನ್ಮದಿನ,16 ವರ್ಷದ ಪಟ್ಟಾಭಿಷೇಕ ಮತ್ತು ಭೋವಿ ಜನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಈ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಮಾನಪ್ಪ ವಜ್ಜಲ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಇಮ್ಮಡಿ ಶ್ರೀಗಳಿಗೆ ವಿವಿಧ ಹೂಗಳಿಂದ ಪುಷ್ಪವೃಷ್ಠಿ ಮಾಡಿ ಶುಭ ಕೋರಿದರು.
ಚಿತ್ರದುರ್ಗ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಭೋವಿ ಸಮುದಾಯ ಸಾವಿರಾರು ಮಂದಿ ಭಕ್ತರು ಕಾರ್ಯಕ್ರಮದಲ್ಲಿ ಭಾಗಿದ್ದರು.
ಸುಮಾರು 6 ಸಾವಿರ ಭೋವಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಗದು ನೀಡಿ ಗೌರವಿಸಲಾಯಿತು.