ಜ್ವಲಂತ ಸಮಸ್ಯೆಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಮುಖಂಡರು ಸೇರಿ ಅನೇಕ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ಮಾಡಿದ್ದೇವೆ ಎಂದು ಜೆಡಿಎಸ್-ಬಿಜೆಪಿ ನಾಯಕರು ತಿಳಿಸಿದ್ದಾರೆ.

ರಸಗೊಬ್ಬರ ವಿಚಾರದಲ್ಲಿ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ, ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿ ಯೋಜನೆ ಸ್ಥಿತಿಗತಿಗಳ ಬಗ್ಗೆ ಚರ್ಚೆಯಾಗಬೇಕಿದೆ. ಪಿಎಸ್ಐ ನೇಮಕಾತಿಗಾಗಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹುದ್ದೆಗಳು ಕಾಲಿ ಬಿದ್ದಿದ್ದು, ಉದ್ಯೋಗಾವಕಾಶ ಇದ್ದರೂ ಕೂಡಾ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡದಿರುವುದೂ ಸೇರಿದಂತೆ ಅನೇಕ ವಿಚಾರಗಳನ್ನು ಕೈಗೆತ್ತಿಕೊಂಡು ಸದನದ ಒಳಗೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

- Advertisement - 

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ 11 ಜನ ಅಮಾಯಕರ ಬಲಿಯಾಯಿತು, ಸಿಎಂ ಹಾಗೂ ಡಿಸಿಎಂ ಪ್ರತಿಷ್ಠೆಯ ಕಾರಣದಿಂದ ಸಾವು ಸಂಭವಿಸಿತು. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಹುಳುಕನ್ನು ಮುಚ್ಚಿಹಾಕಿಕೊಳ್ಳಲು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಅಪಮಾನ ಮಾಡಿತ್ತು. ಆದರೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಉತ್ತರ ನೀಡದೆ ಅಧಿಕಾರಿಗಳನ್ನು ಆರೋಪಿಸಿ ಕೈ ತೊಳೆದುಕೊಳ್ಳುತ್ತಿದ್ದಾರೆ.
ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ “

ಜನವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ ಅಮಾಯಕರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆ ಖಂಡಿಸಿ ಅಧಿವೇಶನಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ NDA ಮೈತ್ರಿಕೂಟದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು.

- Advertisement - 

ಬೆಂಗಳೂರಿನ ಐಪಿಎಲ್ ಸಂಭ್ರಮಾಚರಣೆಯ ಸಂದರ್ಭದಲ್ಲಿನ ರಾಜ್ಯ ಸರ್ಕಾರದ ಬೇಜವಾಬ್ದಾರಿತನ, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಪ್ರಚಾರದ ಗೀಳಿಗೆ 11 ಜನ ಅಮಾಯಕರನ್ನು ಬಲಿಪಡೆದ ಆಡಳಿತ ವೈಫಲ್ಯವನ್ನು ಖಂಡಿಸಲಾಯಿತು.

ಮಳೆಗಾಲದ ಅಧಿವೇಶನದ ಮೊದಲ ದಿನವೇ ಮೈತ್ರಿ ಪಕ್ಷಗಳು ಸರ್ಕಾರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಿದವು. ಕಾಲ್ತುಳಿತ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು.

ಈ ಎಲ್ಲ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು.
ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶನ ಮಾಡಿ ವಿಪಕ್ಷ ನಾಯಕರು ಘೋಷಣೆಗಳನ್ನು ಕೂಗಿದರು.

ರೈತ ವಿರೋಧಿ ಸರ್ಕಾರ:
ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ಮೇಲೆ ತಪ್ಪು ಹೊರೆಸಿ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
ದಲಿತರ ಹಣ ದುರ್ಬಳಕೆ ಮಾಡಿದೆ, ರಸಗೊಬ್ಬರ ಅಭಾವ ಎದುರಾಗಿದೆ, ಕೊಲೆ, ಅತ್ಯಾಚಾರ ಚಟುವಟಿಕೆ ಹೆಚ್ಚಾಗಿದೆ ಎಂದು ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು ಆಕ್ರೋಶ ವ್ಯಕ್ತಪಡಿಸಿದರು.
ಇದು ರೈತ ವಿರೋಧಿ
, ಅಭಿವೃದ್ಧಿ ವಿರೋಧಿ ಸರ್ಕಾರ ಎಂದು ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದರು. ಸದನದಲ್ಲಿ ಸರ್ಕಾರದ ವೈಫಲ್ಯಗಳನ್ನು ಪ್ರಸ್ತಾಪಿಸಿ ಪರಿಣಾಕಾರಿಯಾಗಿ ಹೋರಾಟ ಮಾಡೋದಾಗಿ ಎಚ್ಚರಿಸಿದರು.

ಪ್ರತಿಭಟನೆ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿ.ವೈ.ವಿಜಯೇಂದ್ರ ಮಾತನಾಡಿ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಆದರೆ ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ರೈತರು ರಸಗೊಬ್ಬರಕ್ಕಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ. ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು.

ಅಧಿವೇಶನದಲ್ಲಿ ಧರ್ಮಸ್ಥಳದ ಪ್ರಕರಣವನ್ನು ಚರ್ಚಿಸಿ ಮುಖ್ಯಮಂತ್ರಿಯವರಿಂದ ಸ್ಪಷ್ಟ ಉತ್ತರ ಪಡೆಯಲಾಗುವುದು. ಸರ್ಕಾರ ಪ್ರಕರಣದ ತನಿಖೆಗಾಗಿ ಎಸ್​ಐಟಿ ರಚನೆ ಮಾಡಿದಾಗ ಸ್ವಾಗತಿಸಿದ್ದೆವು. ಆದರೆ ತನಿಖೆಯ ನೆಪದಲ್ಲಿ ಅಲ್ಲಿ ನೆಲ ಅಗೆಯುವುದನ್ನು ಬಿಟ್ಟರೆ ಬೇರೇನೂ ಆಗುತ್ತಿಲ್ಲ, ಧರ್ಮಸ್ಥಳ ಮಂಜುನಾಥ ಸಹಸ್ರಾರು ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತಿದೆ, ಹಾಗಾಗಿ ಸರ್ಕಾರದ ಉತ್ತರ ಪಡೆಯುವುದು ಅತ್ಯವಶ್ಯಕವಾಗಿದೆ ನಾಯಕರು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ವಿಧಾನಸಭಾ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್, ಉಭಯ ಸದನಗಳ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್, ದೊಡ್ಡನಗೌಡ ಪಾಟೀಲ್, ಮಾಜಿ ಸಚಿವರಾದ ಸುರೇಶ್, ಅರಗ ಜ್ಞಾನೇಂದ್ರ, ಸಿ.ಟಿ ರವಿ, ಕೆ.ಗೋಪಾಲಯ್ಯ, ಸಿಸಿ ಪಾಟೀಲ್, ಕಾರ್ಕಾಳ ಸುನೀಲ್, ಜೆಡಿಎಸ್ ಪಕ್ಷದ ಶಾಸಕರಾದ ಭೋಜೇಗೌಡ, ಎ.ಮಂಜು ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 

 

 

Share This Article
error: Content is protected !!
";