ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ‘ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು‘ ಎಂದು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಲೋಕಮಾನ್ಯ ಶ್ರೀ ಬಾಲಗಂಗಾಧರ ತಿಲಕ್ ಅವರ ಜನ್ಮಸ್ಮರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಪತ್ರಕರ್ತರಾಗಿ, ಶಿಕ್ಷಣ ತಜ್ಞರಾಗಿ, ಸ್ವದೇಶಿ ಉದ್ಯಮಿಯಾಗಿ ಅವರ ಆದರ್ಶಮಯ ವ್ಯಕ್ತಿತ್ವವನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಸಿಟಿ ರವಿ, ವಿಧಾನ ಪರಿಷತ್ ವಿರೋಧ ಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

