ಕೃಷಿ ಕಾನೂನು: ಸಂಸದೆ ಕಂಗನಾ ರಣಾವತ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನರೇಂದ್ರ ಮೋದಿ ನೇತೃತ್ವದ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ತರಬೇಕೆಂಬ ಸಂಸದೆ ಕಂಗನಾ ರಣಾವತ್ ಹೇಳಿಕೆ ಬಿಜೆಪಿಯೇ ವಿರೋಧ ವ್ಯಕ್ತಪಡಿಸಿದೆ.

ಕಂಗನಾ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಆಕೆಗೆ ಪಕ್ಷದ ಪರವಾಗಿ ಹೇಳಿಕೆ ಕೊಡಲು ಯಾವುದೇ ಅಧಿಕಾರ ಕೊಟ್ಟಿಲ್ಲ. ಆಕೆಯ ಹೇಳಿಕೆ ಪಕ್ಷದ ನಿಲುವು ಅಲ್ಲಎಂದಿದ್ದಾರೆ

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಭಾಟಿಯಾ ಕೇಂದ್ರ ಸರ್ಕಾರ ಹಿಂಪಡೆದಿರುವ ಕೃಷಿ ಕಾನೂನುಗಳ ಕುರಿತು ಕಂಗನಾ ರಣಾವತ್ ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ. ಅದು ಆಕೆಯ ವೈಯಕ್ತಿಕ ಹೇಳಿಕೆ ಎಂದು ನಾನು ಈ ಮೂಲಕ ಸ್ಪಷ್ಟಪಡಿಸುತ್ತೇನೆಎಂದಿದ್ದಾರೆ.

 

- Advertisement -  - Advertisement - 
Share This Article
error: Content is protected !!
";