ಚಂದ್ರವಳ್ಳಿ ನ್ಯೂಸ್, ಶ್ರೀನಗರ:
ಭಾರತ ದೇಶದ ಉತ್ತರ ಭಾಗದಲ್ಲಿನ ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದಿದ್ದು ಜಮ್ಮು ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ, ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಕಂಡಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ ದಾಟಿದೆ. ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದೆ. ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 90, ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಮೂರು ಹಂತದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮತದಾನ ನಡೆದಿತ್ತು.
ಚುನಾವಣಾ ಫಲಿತಾಂಶ ಮಂಗಳವಾರ ಘೋಷಣೆಯಾಗಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
ನ್ಯಾಷನಲ್ ಕಾನ್ಫರೆನ್ಸ್ 43, ಕಾಂಗ್ರೆಸ್ 7, ಬಿಜೆಪಿ 28 ಸ್ಥಾನ, ಪಿಡಿಪಿ 2 ಮತ್ತು ಇತರರು 7 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 2014ರಲ್ಲಿ ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಪಿಡಿಪಿ ಮೈತ್ರಿಕೂಟದ ಸರ್ಕಾರ ರಚನೆಯಾಗಿತ್ತು. ಆದರೆ ಪೂರ್ಣಾವಧಿಯನ್ನು ಪೂರೈಸದ ಸರ್ಕಾರ 2018ರಲ್ಲಿ ಪತನವಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿತು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ವಾಪಸ್ ಪಡೆದ ಬಳಿಕ 2024ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆದಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ‘ಇಂಡಿಯಾ‘ ಮೈತ್ರಿಕೂಟ ರಚನೆಯಾಗಿತ್ತು. ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದಲ್ಲಿದ್ದ ನ್ಯಾಷನಲ್ ಕಾನ್ಪರೆನ್ಸ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದೆ.
ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟದ ಸೀಟು ಹಂಚಿಕೆಯಂತೆ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಸೀಟುಗಳಲ್ಲಿ ಕಣಕ್ಕಿಳಿದಿತ್ತು. ಸಿಪಿಐ(ಎಂ) ಮತ್ತು ಜೆಕೆಎನ್‌ಪಿಪಿ ಪಕ್ಷಕ್ಕೆ ತಲಾ ಒದೊಂದು ಸೀಟುಗಳನ್ನು ಬಿಟ್ಟುಕೊಡಲಾಗಿತ್ತು.
ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಮತ್ತೆ ಮುಖ್ಯಮಂತ್ರಿಯಾಗುವ ನಿರೀಕ್ಷೆ ಇದೆ. ಉಪ ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್‌ಗೆ ಸಿಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಲೆಫ್ಟಿನೆಂಟ್ ಗವರ್ನರ್ ಐವರು ಶಾಸಕರನ್ನು ನಾಮ ನಿರ್ದೇಶನ ಮಾಡಲಿದ್ದಾರೆ. ಈ ಶಾಸಕರು ಸದನದಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ? ಎಂಬುದು ಸಹ ಕುತೂಹಲಕ್ಕೆ ಕಾರಣವಾಗಿದೆ.
ಹರಿಯಾಣ ವಿಧಾನಸಭಾ ಫಲಿತಾಂಶ-