ಸಂತ್ರಸ್ತರಿಗೆ ಹಸು ಮತ್ತು ಲಕ್ಷ ರೂ.ನೀಡಿದ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಒಂದು ಲಕ್ಷ ರೂ.ಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ ಮೋಹನ್
, ಪರಿಷತ್‌ಸದಸ್ಯರಾದ ಎನ್.ರವಿಕುಮಾರ್, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್, ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥ ನಾರಾಯಣ, ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.

- Advertisement -  - Advertisement - 
Share This Article
error: Content is protected !!
";