ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಹಲ್ಗಾಮ್ ದಾಳಿಗೆ ಪ್ರತಿ ದಾಳಿಯಾಗಿ ಭಾರತವು ಆಪರೇಷನ್ ಸಿಂಧೂರ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ಮತ್ತು ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ ಸ್ಥೈರ್ಯ ನೀಡುವ ಸಲುವಾಗಿ ಇಂದು ಬೆಂಗಳೂರಿನ ವಿದ್ಯಾರಣ್ಯಪುರದ
ಎನ್ಟಿಐ ಆಟದ ಮೈದಾನದಿಂದ ಸಹಕಾರ ನಗರದ ಗಣೇಶ ದೇವಸ್ಥಾನದವರೆಗೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮತ್ತು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ‘ರಾಷ್ಟ್ರ ರಕ್ಷಣೆಗಾಗಿ ನಾವೆಲ್ಲರೂ‘ ಎಂಬ ಘೋಷವಾಕ್ಯದಡಿ ತಿರಂಗಾ ಯಾತ್ರೆ ನಡೆಯಿತು.
ಈ ಸಂದರ್ಭದಲ್ಲಿ ನಿವೃತ್ತ ಮಾರ್ಷಲ್ ಎಸ್. ಪಿ. ಸಿಂಗ್, ಶಾಸಕರಾದ ಚೆನ್ನಿ, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.