ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮತ್ತು ರಾಜ್ಯ ಸಹ ಉಸ್ತುವಾರಿ ಡಾ.ಸುಧಾಕರ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಸಂಘಟನಾ ಪರ್ವದ ವಿಶೇಷ ಸಭೆ ನಡೆಸಿದರು.
ಕಾರ್ಯಕರ್ತರ ಕಠಿಣ ಪರಿಶ್ರಮದಿಂದ ದಾಖಲೆಯ ಪ್ರಮಾಣದ ಸದಸ್ಯತ್ವ ನೋಂದಣಿಯಾಗಿದ್ದು ಸದ್ಯ ಸಕ್ರಿಯ ಸದಸ್ಯತ್ವ ಅಭಿಯಾನ, ಪಕ್ಷದ ಕಮಿಟಿಗಳ ರಚನೆ ಸೇರಿದಂತೆ ಸಂಘಟನೆಗೆ ಶಕ್ತಿತುಂಬುವ ನಿಟ್ಟಿನಲ್ಲಿ ಸಂಘಟನಾ ಪರ್ವದ ಯಶಸ್ಸಿಗೆ ಶ್ರಮಿಸಬೇಕೆಂಬ ಸಂಕಲ್ಪ ಮಾಡಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಸಂಘಟನಾ ಪರ್ವದ ರಾಜ್ಯ ವೀಕ್ಷಕ ಪೊನ್‌ರಾಧಾಕೃಷ್ಣನ್, ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,
ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಶಾಸಕರಾದ ಪ್ರೀತಂಗೌಡ, ಬಿಜೆಪಿ ಮುಖಂಡ ನಂದೀಶ್ ರೆಡ್ಡಿ, ವಿಧಾನ ಪರಿಷತ್‌ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.