ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಕೋಮು ಸಂಘರ್ಷ ಸೃಷ್ಟಿಸುವ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಳ್ಳು, ದ್ವೇಷ ಹರಡುವುದು, ಜಾತಿ – ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಕೋಮು ಸಂಘರ್ಷ ಸೃಷ್ಟಿಸುವುದೇ ಕರ್ನಾಟಕ ಬಿಜೆಪಿ ಪಕ್ಷದ ಬಂಡವಾಳ ಎಂದು ಕಾಂಗ್ರೆಸ್ ಆರೋಪಿಸಿದೆ.

ವಕ್ಫ್ ಆಸ್ತಿಗಳ ಒತ್ತುವರಿಯನ್ನು ತೆರವು ಮಾಡಿಸಬೇಕು ಮತ್ತು ಪಹಣಿಗಳಲ್ಲಿ ವಕ್ಫ್ ಆಸ್ತಿಎಂದು ನಮೂದಿಸಬೇಕು ಎಂಬ ನಿರ್ಧಾರ ಬಿ.ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲೇ ಆಗಿತ್ತು. ಅದೇ ಅವಧಿಯಲ್ಲೇ ರೈತರಿಗೆ ಮತ್ತು ಭೂಮಾಲೀಕರಿಗೆ ಅತಿಹೆಚ್ಚು ನೋಟಿಸ್‌ಗಳನ್ನು ನೀಡಿರುವುದು ಈಗ ಬಯಲಾಗಿದೆ ಎಂದು ಕಾಂಗ್ರೆಸ್ ದೂರಿದೆ.

ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿ ತನ್ನ ಹುಳುಕು ಮುಚ್ಚಿಕೊಳ್ಳಲು ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಕ್ಫ್ ಆಸ್ತಿವಿಚಾರ ಮುಂದಿಟ್ಟು ಪ್ರತಿಭಟನೆಯ ನಾಟಕವಾಡಿದರೂ ಉಪ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಮತದಾರರು ಸರಿಯಾದ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";