ಚಂದ್ರವಳ್ಳಿ ನ್ಯೂಸ್, ಮಂಡ್ಯ:
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಉತ್ತಮ ನಡೆಯುತ್ತಿರುವುದು ಬಿಜೆಪಿ, ಜೆಡಿಎಸ್ ಅವರಿಗೆ ಸಹಿಸಲು ಆಗುತ್ತಿಲ್ಲ. ಅಲ್ಲದೆ ಬಿಜೆಪಿ ಅವರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಆರ್ಥಿಕವಾಗಿ ಬಲಿಷ್ಠವಾಗಿದೆ.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಬಂಡವಾಳ ಹೂಡಿಕೆಯಲ್ಲಿ ಮೂರನೇ ರಾಜ್ಯ ಕರ್ನಾಟಕ. ಜಿಎಸ್‌ಟಿ ಕಟ್ಟುತ್ತಿರುವುದರಲ್ಲಿ ಎರಡನೇ ಸ್ಥಾನದಲ್ಲಿ ಇದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಎಷ್ಟಿದೆ ಎಂದುಗೊತ್ತಾಗುತ್ತೆ. ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ. ನಾವು ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಬಡತನ ನಿರ್ಮೂಲನೆಗೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ನಮ್ಮ ಗ್ಯಾರಂಟಿಯನ್ನು ಅನುಷ್ಠಾನ ಮಾಡಲು ಆಗಲ್ಲ ಎಂದು ಹೇಳ್ತಾ ಇದ್ರು.
ನಾವು ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ. ಬಜೆಟ್‌ನಲ್ಲಿ ಗ್ಯಾರಂಟಿಗಾಗಿ ಹಣ ಮೀಸಲಿಟ್ಟಿದ್ದೇವೆ. ಗೃಹಲಕ್ಷ್ಮಿ ಯೋಜನೆಯಿಂದ ಲ್ಯಾಪ್ ಟಾಪ್, ವಾಶಿಂಗ್ ಮಿಷನ್ ಎಲ್ಲಾ ತೆಗೆದುಕೊಂಡಿದ್ದಾರೆ. ಈ ಯೋಜನೆಗಳು ಜನರಿಗೆ ತಲುಪುತ್ತಿವೆ. ಆದರೆ ಜೆಡಿಎಸ್, ಬಿಜೆಪಿಯವರು ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಲಾ ಗ್ಯಾರಂಟಿ ತಗೊಂಡುಜನರು ಚೆನ್ನಾಗಿದ್ದಾರೆ. ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ. ಕೇವಲ ಬಿಜೆಪಿಯವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಅಷ್ಟೇ. ಬಿಜೆಪಿ-ಜೆಡಿಎಸ್ ಪ್ರತಿಭಟನೆ ಮಾಡೋದು ವಿಪರ್ಯಾಸ. ದೇಶದಲ್ಲಿ ಟ್ಯಾಕ್ಸ್ ಹೆಚ್ಚಾಗಿದ್ದರಿಂದ ಬೆಲೆ ಏರಿಕೆ ಆಗಿದೆ. ಕೇಂದ್ರ ಸರ್ಕಾರ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏಕೆ ಏರಿಕೆ ಮಾಡಿದ್ದಾರೆ. ರಾಜ್ಯ ಬಿಜೆಪಿಯವರಿಗೆ ಕೇಂದ್ರ ಸರ್ಕಾರದ್ದು ಏನು ಕಾಣಲ್ವಾ? ಕೇಂದ್ರ ಸರ್ಕಾರದ ನಡೆಯಿಂದ ಎಲ್ಲಾ ಬೆಲೆ ಏರಿಕೆ ಆಗಿದೆ ಎಂದು ಸಚಿವರು ದೂರಿದರು.
ರಾಜ್ಯಕ್ಕೆ ನೀಡಬೇಕಾದ ತೆರಿಗೆ ಪಾಲಿನ ಅನುದಾನವನ್ನು ಕೇಂದ್ರ ಸರ್ಕಾರ ಕೊಚುತ್ತಿಲ್ಲ. 12 ಸಾವಿರ ಕೋಟಿಯನ್ನು ಕೇಂದ್ರ ಸರ್ಕಾರ ಕೊಡಬೇಕಿತ್ತು. ಆದ್ರೆ ಕಳೆದ ವರ್ಷವೂ ಕೊಡಲಿಲ್ಲ, ಈ ವರ್ಷವೂ ಕೊಡಲಿಲ್ಲ. ನಾವು ಮೊದಲ ಬಾರಿಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದೇವೆ. ಹೀಗಾಗಿ ಜನರಿಂದ ತೆರಿಗೆ ಹಣ ತೆಗೆಯಲು ಮುಂದಾಗಿದ್ದೇವೆ. ಬಿಜೆಪಿ, ಜೆಡಿಎಸ್ ಅವರು ಪ್ರತ್ಯೇಕ ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನು ನೋಡಿದ್ರೆ ಇಬ್ಬರಲ್ಲೂ ಬಿರುಕು ಬಿಟ್ಟಿದೆ ಎನಿಸುತ್ತಿದೆ ಎಂದು ಗೃಹ ಸಚಿವರು ಅನುಮಾನ ವ್ಯಕ್ತಪಡಿಸಿದರು.
ಆನ್‌ಲೈನ್ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪರಮೇಶ್ವರ್, ಆನ್‌ಲೈನ್ ಬೆಟ್ಟಿಂಗ್‌ಬಗ್ಗೆ ಒಂದು ಸಭೆ ಮಾಡಲಾಗಿದೆ. ಬೆಟ್ಟಿಂಗ್ ನಡೆಸುವವರನ್ನು ಸಹ ಕರೆದಿದ್ದೇವೆ. ಕಾನೂನು ವ್ಯಾಪ್ತಿಯಲ್ಲಿ ಇರುವುದಕ್ಕೆ ಅವರು ಒಪ್ಪಿದ್ದಾರೆ. ಹೊಸ ನಿಯಮಗಳನ್ನುಸಹ ತರುತ್ತೇವೆ. ಒಂದುತಿಂಗಳ ಬಳಿಕ ಈ ಬಗ್ಗೆ ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದು ಅವರು ತಿಳಿಸಿದರು.
ಹನಿಟ್ರ್ಯಾಪ್ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದ್ದೇವೆ. ತನಿಖೆಯಲ್ಲಿ ಮುಂದುವರೆಯುತ್ತಿರುವಾಗ ಕುಮಾರಸ್ವಾಮಿ ಏಕೆ ಮಾತನಾಡುತ್ತಾರೆ ಗೊತ್ತಿಲ್ಲ. ಅವರ ಬಳಿ ಟನ್‌ಗಟ್ಟಲೆ ದಾಖಲೆಗಳು ಇದ್ದರೆ ಕೊಡಲಿ. ಅವರ ಪ್ರಕಾರ ಅವರು ಒಬ್ಬರೆ ಸರಿ ಇರೋದು ಎಂದು ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಪೊಲೀಸ್ ಇಲಾಖೆ ಸಮರ್ಥವಾಗಿಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಅದಕ್ಕಾಗಿ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತಿದ್ದೇನೆ. ಆಯಾ ಜಿಲ್ಲೆಯ ಪೊಲೀಸರಿಗೆ ಸೂಕ್ತ ಸಲಹೆ ನೀಡುತ್ತಿದ್ದೇನೆ ಎಂದು ಗೃಹ ಸಚಿವರು ತಿಳಿಸಿದರು.