ಬಿಜೆಪಿ ಕಾನೂನು ಪ್ರಕೋಷ್ಠ ಹೆಚ್ಚು ಸಮರ್ಪಿಸಿಕೊಳ್ಳಬೇಕು-ವಿಜಯೇಂದ್ರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾರ್ಯಕರ್ತರಿಗೆ ಧೈರ್ಯ ತುಂಬಲು ಕಾನೂನು ಪ್ರಕೋಷ್ಠ ಹೆಚ್ಚು ಸಮರ್ಪಿಸಿಕೊಳ್ಳಲಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೂಚನೆ ನೀಡಿದರು.

ಬೆಂಗಳೂರಿನ ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಾನೂನು ಪ್ರಕೋಷ್ಠದ ವತಿಯಿಂದ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

- Advertisement - 

ಸಮರ್ಪಣಾ ಭಾವದಿಂದ ಶ್ರಮಿಸುತ್ತಿರುವ ಕಾನೂನು ಪ್ರಕೋಷ್ಠವು ಪಕ್ಷದ ಮುಂಬರುವ ಎಲ್ಲ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಂಡು ವಿರೋಧ ಪಕ್ಷವಾಗಿ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಎದುರಾಗಬಹುದಾದ ಸುಳ್ಳು ಮೊಕದ್ದಮೆಗಳು, ಹಿಂದೂ ಕಾರ್ಯಕರ್ತರ ಮೇಲೆ ಅನಾವಶ್ಯಕವಾಗಿ ಹೇರುತ್ತಿರುವ ದ್ವೇಷಪೂರಿತ ಪ್ರಕರಣಗಳೂ ಸೇರಿದಂತೆ ಕಾನೂನು ಸಮಸ್ಯೆಗಳಿಗೆ ಮುಂದಾಳತ್ವ ವಹಿಸಿ ಧೈರ್ಯ, ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಶ್ರಮಿಸಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ ಎನ್.ವಿ. ಫಣೀಶ್ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್, ಕಾನೂನು ಪ್ರಕೋಷ್ಠದ ರಾಜ್ಯ ಸಹ-ಸಂಚಾಲಕ ಲಕ್ಷ್ಮಣ್ ಸಿ. ಕುಲಕರ್ಣಿ ಸೇರಿದಂತೆ ಕಾನೂನು ಪ್ರಕೋಷ್ಠದ ಪದಾಧಿಕಾರಿಗಳು, ಉಪಸ್ಥಿತರಿರಲಿದ್ದಾರೆ.

- Advertisement - 

 

Share This Article
error: Content is protected !!
";